ಭಾರತ, ಏಪ್ರಿಲ್ 26 -- ಬೆಂಗಳೂರು: ಮೊದಲ ರೈತ ಸಂತೆಗೆ ಸಿಕ್ಕಿದ ಪ್ರೋತ್ಸಾಹ ಮತ್ತು ಸ್ಪೂರ್ತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ರೈತಸಂತೆ ನಡೆಯುತ್ತಿದೆ. ರೈತರೇ ನೇರವಾಗಿ ತಮ್ಮ ಉತ್ಪನ್ನಗಳನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ನೇರ ಮಾರಾಟದ ಮೂಲಕ ನಮ್ಮ ಹೋರಾಟ' 'ನಮ್ಮ ಬೆಳೆಗೆ ನಮ್ಮದೇ ಬೆಲೆ' ಶೀರ್ಷಿಕೆಯಡಿಯಲ್ಲಿ ಈ ರೈತಸಂತೆಯನ್ನು ಆಯೋಜಿಸಿದ್ದಾರೆ.
ಆರ್ ಆರ್ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಇಂದು ಮತ್ತು ನಾಳೆ (ಏ. 26 ರಿಂದ 27) ಎರಡೂ ದಿನ ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಇಲ್ಲಿ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ರೈತರೇ ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಿದ್ದಾರೆ. ಹಾಗಾಗಿ ಗ್ರಾಹಕರಿಗೂ ಕಡಿಮೆ ಬೆಲೆಯಲ್ಲಿ ಉತ್ಪನ್ನಗಳು ಲಭ್ಯ. ಈ ಬಾರಿಯ ವಿಶೇಷ ಏನೆಂದರೆ ಮಾವಿನ ಹಣ್ಣು ಆಗಮಿಸಿದ್ದು ಹೆಚ್ಚು ಮಾರಾಟವಾಗುತ್ತಿದೆ. ಜತೆಗೆ ಉತ್ತರ ಕರ್ನಾಟಕದ ಅಪ್ಪಟ ಸಜ್ಜೆ ರೊಟ್ಟಿ,...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.