ಭಾರತ, ಮಾರ್ಚ್ 23 -- Bengaluru Second Airport: ಬೆಂಗಳೂರು ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೇ ಏಪ್ರಿಲ್‌ನಲ್ಲಿ ಅವುಗಳ ಪರಿಶೀಲನೆಗೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಅಧಿಕಾರಿಗಳು ಬರಲಿದ್ದಾರೆ' ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಬೆಂಗಳೂರು ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ-ಹಾಸನ ಹೆದ್ದಾರಿಯಲ್ಲಿ ಒಂದು ಸ್ಥಳವನ್ನು 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಕರ್ನಾಟಕದ ತಜ್ಞರ ತಂಡ ಈಗಾಗಲೇ ಅವುಗಳ ಪರಿಶೀಲನೆ ನಡೆಸಿದೆ. ಇದರಂತೆ, ಮಾರ್ಚ್ 5 ರಂದು ಬೆಂಗಳೂರು ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಗುರುತಿಸಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಅವುಗಳನ್ನು ಪರಿಶೀಲಿಸಿರುವ ಎಎಐ ತಂಡ ಏಪ್ರಿಲ್ 7 ರಿಂದ 9ರ ನಡುವೆ ಸ್ಥಳ ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂಬಿ ಪಾಟೀಲ್ ವಿವರಿಸಿದರು....