ಭಾರತ, ಮಾರ್ಚ್ 19 -- ಬೆಂಗಳೂರು: ಜಗದ್ವಿಖ್ಯಾತಿ ಪಡೆದಿರುವ ಬೆಂಗಳೂರು ಕರಗ ಏಪ್ರಿಲ್‌ 12ರಂದು ನಡೆಯಲಿದ್ದು, ಕರಗ ನಿರಾತಂಕವಾಗಿ ನಡೆಯಲು ಅಗತ್ಯವಾದ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಕರಗ ಸಮಿತಿಯ ಪದಾಧಿಕಾರಿಗಳು ಸಭೆ ನಡೆಸಿ ಚರ್ಚಿಸಿದರು.

ಕರಗ ನಡೆಯುವ ಕೇಂದ್ರ ಸ್ಥಳವಾದ ಧರ್ಮರಾಯಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್‌ ಮೆನನ್‌ ಸೂಚಿಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಕರಗ ಶಕ್ತ್ಯೋತ್ಸವ ಸಂಚರಿಸುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳನ್ನು ದುರಸ್ತಿ ಮಾಡಬೇಕು.

ಉತ್ಸವ ಸಾಗುವ ರಸ್ತೆಗಳಲ್ಲಿನ ಬೀದಿ ದೀಪಗಳನ್ನು ಸರಿಪಡಿಸಬೇಕು. ಅಗತ್ಯವಿರುವ ಸ್ಥಳಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ವಿದ್ಯುತ್ ಸಂಪರ್ಕ ಕಡಿ...