Bangalore, ಏಪ್ರಿಲ್ 6 -- ಬೆಂಗಳೂರು: ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿರುವ ಪ್ರಸಿದ್ದ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ನಡೆಯಲಿದ್ದು, ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಏಪ್ರಿಲ್ 6 ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಏ.8 ಮಂಗಳವಾರ ಬೆಳಿಗ್ಗೆ 10 ಗಂಟೆಯವರೆಗೆ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಕೆಲವೊಂದು ಸಂಚಾರ ಮಾರ್ಪಾಡು ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಎರಡು ದಿನಗಳವರಗೆ ನಿರ್ಬಂಧ ಇರುವುದರಿಂದ ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆಯೂ ಸೂಚನೆಗಳನ್ನು ನೀಡಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪರ್ಯಾಯ ಮಾರ್ಗಗಳ ಆದೇಶ ಹೊರಡಿಸಿದ್ದಾರೆ.
1. ಸಂಚಾರ ನಿರ್ಬಂಧ: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಜಂಕ್ಷನ್ ನಿಂದ ಮೈಸೂರು ರಸ್ತೆ ಕಿಂಕೋ ಜಂಕ್ಷನ್ ವರೆಗೂ (ಪೂರ್ವದಿಂದ ಪಶ್ಚಿಮದ ಕಡೆಗೆ) ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ. ನಗರದ ಒಳಭಾಗದದಿಂ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.