ಭಾರತ, ಮೇ 26 -- ಬೆಂಗಳೂರು: ಹೊವಲಯದ ದೇವನಹಳ್ಳಿಯ ಫಾರ್ಮ್ ಹೌಸ್ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಠಾಣೆ ಪೊಲೀಸರು ಭಾನುವಾರ ಮುಂಜಾನೆ ದಾಳಿ ನಡೆಸಿ ಏಳು ಯುವತಿಯರು ಸೇರಿದಂತೆ 31 ಮಂದಿಯನ್ನು ಬಂಧಿಸಿದ್ದಾರೆ. ಇವರು ಡ್ರಗ್ಸ್ ಸೇವಿಸಿರುವ ಶಂಕೆ ಇದ್ದು ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.
ತುಂತುರು ಮಳೆಯ ನಡುವೆಯೂ ಡಿಜೆ ಹಾಕಿಕೊಂಡು ಮಾದಕ ವಸ್ತು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದ್ದವರಲ್ಲರೂ ಬಹುತೇಕ ಸಾಫ್ಟ್‌ವೇರ್ ಇಂಜಿನಿಯರ್‌ಗಳೆಂದು ಪೊಲೀಸರು ಹೇಳಿದ್ದಾರೆ. ಇವರು ಗಾಂಜಾ, ಕೊಕೈನ್ ಮತ್ತು ಅಫೀಮು ಸೇವಿಸಿದ್ದರು ಎಂದು ತಿಳಿದು ಬಂದಿದೆ.
ಡಿಜೆ ಶಬ್ದದಿಂದ ಬೇಸತ್ತ ಕನ್ನಮಂಗಲ ಸಮೀಪದ ಸ್ಥಳೀಯ ಗ್ರಾಮಸ್ಥರು ರೇವ್ ಪಾರ್ಟಿ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರ ತಂಡ ತಡರಾತ್ರಿ ದಾಳಿ ನಡೆಸಿತ್ತು. ಪಾರ್ಟಿಯಲ್ಲಿ ಭಾಗವಹಿಸಿದ್ದ ಕೆಲವರು ಪೊಲೀಸರನ್ನು ನೋಡುತ್ತಿದ್ದಂತೆ ಪರಾರಿಯಾಗಿದ್ದಾರೆ. ಫಾರ್ಮ ಹೌಸ್ ಮಾಲೀಕ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.