ಭಾರತ, ಫೆಬ್ರವರಿ 10 -- ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಬೆಂಗಳೂರಿನ ಸೋಲದೇವನಹಳ್ಳಿ, ಹೆಬ್ಬಾಳ ಭಾಗದಲ್ಲಿ ಮಂಗಳವಾರ (ಫೆ 11) ಮತ್ತು ಬುಧವಾರ (ಫೆ 12) ವಿದ್ಯುತ್ ಕಡಿತ ಉಂಟಾಗಲಿದೆ. ಕೆಪಿಟಿಸಿಎಲ್‌ ತುರ್ತು ನಿರ್ವಹಣಾ ಕಾಮಗಾರಿಗಳನ್ನು ನಡೆಸುತ್ತಿರುವ ಕಾರಣ ಈ ಪವರ್‌ ಕಟ್‌ ಘೋಷಿಸಲಾಗಿದೆ ಎಂದು ಬೆಸ್ಕಾಂ ಹೇಳಿದೆ. ವಿಶೇಷವಾಗಿ ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಕರೆಂಟ್ ಇರಲ್ಲ. ಅದೇ ರೀತಿ, ಹೆಬ್ಬಾಳ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಲಿದೆ.

ಕೆಪಿಟಿಸಿಎಲ್ 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವ ಕಾರಣ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಕೆಲವು ಪ್ರದೇಶಗಳಲ್ಲಿ ಫೆ 11 ರಂದು ಮತ್ತು ಫೆ 12 ರಂದು ಬೆಳಿಗ್ಗೆ 10:00 ಯಿಂದ ಮಧ್ಯಾಹ್ನ 01:0...