ಭಾರತ, ಏಪ್ರಿಲ್ 22 -- ಬೆಂಗಳೂರು ಬೀದಿ ಕಾಳಗ ಕೇಸ್: ಬೆಂಗಳೂರಿನ ಸಿವಿ ರಾಮನ್ ನಗರದ ಗೋಪಾಲನ್ ಗ್ರ್ಯಾಂಡ್ ಮಾಲ್ ಸಮೀಪ ಸೋಮವಾರ (ಏಪ್ರಿಲ್ 21) ಬೆಳಿಗ್ಗೆ ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ ಘಟನೆ ಸಂಚಲನ ಮೂಡಿಸಿತ್ತು. ಅದಾದ ಬಳಿಕ ಬಹಿರಂಗವಾದ ಸಿಸಿಟಿವಿ ದೃಶ್ಯಗಳು ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್‌ ಅವರು ಆಕ್ರಮಣಕಾರಿಯಾಗಿ ವರ್ತಿಸಿದ್ದು ಕಂಡುಬಂದಿದೆ. ಇದು ಈ ಹಲ್ಲೆ ಪ್ರಕರಣದ ಚಿತ್ರಣವನ್ನು ಬದಲಾಯಿಸಿದ್ದು, ವಿಂಗ್ ಕಮಾಂಡರ್ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಈ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರಿದ್ದರೂ ಅವರ ವಿರುದ್ಧ ಕ್ರಮಕ್ಕೆ ಆದೇಶ ನೀಡಿದ್ದಾಗಿ ಹೇಳಿದ್ದಾರೆ.

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕ...