ಭಾರತ, ಏಪ್ರಿಲ್ 26 -- ಬೆಂಗಳೂರು ಬೀದಿ ಜಗಳ ಕೇಸ್: ಬೆಂಗಳೂರಿನ ಸಿವಿ ರಾಮನ್ ನಗರದ ಗೋಪಾಲನ್ ಗ್ರ್ಯಾಂಡ್ ಮಾಲ್ ಸಮೀಪ ಸೋಮವಾರ (ಏಪ್ರಿಲ್ 21) ಬೆಳಿಗ್ಗೆ ನಡೆದ ಬೀದಿ ಜಗಳ ಕೇಸ್‌ಗೆ ಸಂಬಂಧಿಸಿ ದಾಖಲಾಗಿರುವ ಎಫ್‌ಐಆರ್ ಆಧರಿಸಿ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಕರ್ನಾಟಕ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.
ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ, 'ನನ್ನ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಈ ಕುರಿತಾದ ನ್ಯಾಯಿಕ ಪ್ರಕ್ರಿಯೆ ರದ್ದುಮಾಡಬೇಕು. ಅದರಲ್ಲಿ ಹುರುಳಿಲ್ಲ' ಎಂದು ಕೋರಿ ವಾಯುಪಡೆ ಅಧಿಕಾರಿಯೂ ಆಗಿರುವ ಕೋಲ್ಕತ್ತಾದ ಶೀಲಾದಿತ್ಯ ಬೋಸ್ ಸಲ್ಲಿಸಿದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ, ಈ ಮಧ್ಯಂತರ ಆದೇಶ ನೀಡಿದೆ.
ಶೀಲಾದಿತ್ಯ ಬೋಸ್ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು. ಕಾನೂನು ಪರಿಪಾಲಿಸಿಕೊಂಡೇ ವಿಚಾರಣೆ ನಡೆಸಬೇಕು. ಕಾನೂನು ಪ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.