ಭಾರತ, ಜನವರಿ 28 -- ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಗೂ ಮುನ್ನ ಬೆಂಗಳೂರು ಬುಲ್ಸ್ ತಂಡದಿಂದ ಆಶ್ಚರ್ಯಕರ ಬೆಳವಣಿಗೆಯೊಂದು ನಡೆದಿದೆ. ಪಿಕೆಎಲ್‌ನ ಜನಪ್ರಿಯ ಫ್ರಾಂಚೈಸಿಯು ತಂಡದಲ್ಲಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದ ಕೋಚ್‌ ರಣಧೀರ್ ಸಿಂಗ್ ಸೆಹ್ರಾವತ್ ಅವರನ್ನು ರಿಲೀಸ್‌ ಮಾಡಿದೆ. ಬುಲ್ಸ್ ತಂಡವು ಮೊದಲ ಸೀಸನ್‌ನಲ್ಲಿಯೇ ರಣಧೀರ್ ಅವರನ್ನು ತಮ್ಮ ಮುಖ್ಯ ಕೋಚ್ ಆಗಿ ನೇಮಿಸಿತ್ತು. ಸತತ 11 ಸೀಸನ್‌ಗಳಿಗೆ ಒಂದೇ ಕೋಚ್ ಅನ್ನು ಉಳಿಸಿಕೊಂಡ ಏಕೈಕ ಫ್ರಾಂಚೈಸಿ ಬೆಂಗಳೂರು ಬುಲ್ಸ್‌. ಇದೀಗ ಅವರೊಂದಿಗಿನ ಸುದೀರ್ಘ ನಂಟು ಕೊನೆಗೊಂಡಿದೆ. ಹೀಗಾಗಿ ಫ್ರಾಂಚೈಸಿಯ ನಿರ್ಧಾರ ಅಭಿಮಾನಿಗಳಿಗೆ ಅಚ್ಚರಿ ತಂದಿದೆ.

ರಣಧೀರ್ ಸಿಂಗ್ ಸೆಹ್ರಾವತ್ ಅವರ ಕೋಚಿಂಗ್‌ನಲ್ಲಿ ಬೆಂಗಳೂರು ಬುಲ್ಸ್ ತಂಡವನ್ನು ಹಲವು ಬಾರಿ ಸೆಮಿಫೈನಲ್‌ಗೆ ಪ್ರವೇಶಿಸಿತ್ತು. ಮುಖ್ಯವಾಗಿ ತಂಡವು ಪ್ರೊ ಕಬಡ್ಡಿ ಲೀಗ್‌ನ ಆರನೇ ಆವೃತ್ತಿಯಲ್ಲಿ ಫೈನಲ್‌ ಪ್ರವೇಶಿಸಿದ್ದು ಮಾತ್ರವಲ್ಲದೆ, ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ತಂ...