Bengaluru, ಮಾರ್ಚ್ 23 -- ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶನಿವಾರ (ಮಾರ್ಚ್ 22) ಸಂಜೆ ಕೆಲ ನಿಮಿಷ ಭಾರಿ ಮಳೆ ಸುರಿಯಿತು. ಇದರಿಂದಾಗಿ ಅನೇಕ ಕಡೆ ರಸ್ತೆಗಳಲ್ಲಿ ನೀರು ನಿಂತುಕೊಂಡು ಸಂಚಾರ ಅಸ್ತವ್ಯಸ್ತವಾಯಿತು, ಬೆಂಗಳೂರು ನಗರ ಹಾಗೂ ನಗರದ ಹೊರವಲಯಗಳಲ್ಲಿ ಕೂಡ ಇದೇ ಸಮಸ್ಯೆ ಕಾಣಿಸಿಕೊಂಡಿತ್ತು,

ಬೆಂಗಳೂರು ಬೇಸಿಗೆ ಮಳೆ ಅವಾಂತರದ ವೇಳೆ ಪುಲಕೇಶಿ ನಗರ ಸಮೀಪ ದೇವರಜೀವನಹಳ್ಳಿಯಲ್ಲಿ ಮರ ಬಿದ್ದು 3 ವರ್ಷದ ಬಾಲಕಿಯ ಸಾವು ಸಂಭವಿಸಿದೆ. ವಿವಿಧೆಡೆ ನೀರು ತುಂಬಿದ ರಸ್ತೆಗಳಲ್ಲಿ ವಾಹನ ಸವಾರರು ಪರದಾಡಿದರು.

ಬೆಂಗಳೂರು ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್ (ಕೆ ಆರ್ ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಎಂ. ಎಂ. ಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿರುವುದರಿಂದ ವೈಟ್‌ಫೀಲ್ಡ್‌, ಮಹದೇವಪುರ ಮತ್ತು ಕೆ ಆರ್ ಪುರ ಕಡೆಗೆ ಹೋಗುವ ವಾಹನ ಸವಾರರು ಸಂಕಟ ಅನುಭವಿಸಿದರು.

ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್ (ಕೆ ಆರ್ ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಎಂ. ಎಂ. ಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿದ್ದ...