Bengaluru, ಜೂನ್ 7 -- ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆ ಬದಿಗೆ ಉರುಳಿದ್ದು, 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯ ವೇಳೆಗೆ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಹೆಚ್ಚಿನವರು ಹಬ್ಬದ ಪ್ರಯುಕ್ತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಪ್ರಯಾಣಿಕರು ನಿದ್ದೆಯ ಮುಂಪರೆಯಲ್ಲಿರುವ ಸಂದರ್ಭದಲ್ಲಿ ಗುಂಡ್ಯ ಸಮೀಪದ ಬರ್ಚಿನಹಳ್ಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಯಾವುದೇ ರೀತಿಯ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ಗಾಯಗೊಂಡವರನ್ನು ಫಹದ್ (20) ಮೂಡಬಿದ್ರೆ, ರಂಝೀನ್(25) ಪರಂಗಿಪೇಟೆ, ಉಮ್ಮರ್ (53)ದೇರಳಕಟ್ಟೆ, ತಮೀನ್(19) ಪುತ್ತೂರು, ಇಷಾಮ್(19) ಸಾಲ್ಮರ ಪುತ್ತೂರು, ರುಕ್...