Bengaluru, ಫೆಬ್ರವರಿ 11 -- Bangalore Metro Fare Hike: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದು, ವಿಪಕ್ಷ ಬಿಜೆಪಿ ನಾಯಕರು ಕೂಡ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಖಂಡಿಸಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಅಂಶಗಳ ಕಡೆಗೆ ಗಮನಸೆಳೆದಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗ...