Bangalore, ಮೇ 24 -- ಬೆಂಗಳೂರು: ಪಿಎಂ ಇ-ಡ್ರೈವ್ ಅಡಿಯಲ್ಲಿ ಬೆಂಗಳೂರು ನಗರಕ್ಕೆ 4500 ಇ-ಬಸ್ ಗಳನ್ನುಹಂಚಿಕೆ ಮಾಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳ ಸಂಖ್ಯೆ ಮುಂದಿನ ಎರಡು ವರ್ಷಗಳಲ್ಲಿ 10,000 ತಲುಪುವ ನಿರೀಕ್ಷೆ ಇದೆ. ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ದೇಶದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿತ್ತು. ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೂ ಸಹ ಹೆಚ್ಚಿನ ಬಸ್ ಗಳಿಗೆ ಬೇಡಿಕೆ ಇಟ್ಟಿದ್ದರು.
ಸಚಿವ ಕುಮಾರಸ್ವಾಮಿ ಅವರು, ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ. ದೆಹಲಿ ಸಾರಿಗೆ ಸಂಸ್ಥೆ 2800 ಬಸ್, ಸೂರತ್ ನಗರ ಸಾರಿ...
Click here to read full article from source
To read the full article or to get the complete feed from this publication, please
Contact Us.