Bangalore, ಏಪ್ರಿಲ್ 17 -- ಬೆಂಗಳೂರು: ಬೆಂಗಳೂರು ಹಾಗೂ ವಿಜಯಪುರ ನಡುವಿನ ರೈಲು ಪ್ರಯಾಣ ಅವಧಿ ತಗ್ಗಿಸುವ ಕುರಿತು ನಿರಂತರ ಪ್ರಯತ್ನ ಮುಂದುವರಿದಿದೆ. ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಗುಮ್ಮಟ ನಗರಿ ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿರುವ 14-15 ಗಂಟೆಗಳಿಂದ ಕನಿಷ್ಠ 10 ಗಂಟೆಗಳಿಗೆ ಇಳಿಸುವ ಸಂಬಂಧ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಈ ನಿಟ್ಟಿನಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ಸಂಬಂಧಿಸಿದ ಇಲಾಖೆಗಳು ಮತ್ತು ನೈರುತ್ಯ ರೈಲ್ವೆಯ ಉನ್ನತಾಧಿಕಾರಿಗಳ ಜತೆ ರಾಜ್ಯದ ಎಲ್ಲ ರೈಲ್ವೇ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂಬಂಧ ಸದ್ಯದಲ್ಲೇ ಮತ್ತೊಂದು ಸಭೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಬೆಂಗಳೂರು- ವಿಜಯಪುರ ನಡುವೆ ಸಂಚರಿಸುವ ಕೆಲವೊಂದಿಷ್ಟು ರೈಲುಗಳನ್ನಾದರೂ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸುವಂತೆ ಮಾಡಿದರೆ ಆ ಭಾಗದ ಜನರಿಗೆ ಹೆಚ್ಚಿನ ಅನುಕೂ...
Click here to read full article from source
To read the full article or to get the complete feed from this publication, please
Contact Us.