ಭಾರತ, ಏಪ್ರಿಲ್ 28 -- ಬೆಂಗಳೂರು: ಕೆಂಪೇಗೌಡ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಮಾರ್ಗದಲ್ಲಿ ಸಂಚಾರ ಮಾಡುವವರಿಗೆ ಶುಭಸುದ್ದಿ. ಇನ್ನು ಮುಂದೆ ಈ ಮಾರ್ಗದಲ್ಲಿ ನೀವು ಎಲೆಕ್ಟ್ರಿಕ್ ಏಸಿ ಬಸ್‌ಗಳಲ್ಲಿ ಸಂಚಾರ ಮಾಡಬಹುದು. ಮೇ ತಿಂಗಳಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಹೋಗುವವರು ಮತ್ತು ಅಲ್ಲಿಂದ ಬರುವವರು ವಿದ್ಯುತ್ ಚಾಲಿತ ಹವಾನಿಯಂತ್ರಿತ ಬಸ್‌ಗಳಲ್ಲಿ ಪ್ರಯಾಣ ಮಾಡಲು ಸಾಧ್ಯವಾಗುತ್ತದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿಮಾನ ನಿಲ್ದಾಣದ ಆವರಣದಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಕಾರ್ಯವನ್ನು ಮುಂದುವರೆಸಿದೆ.

ಟರ್ಮಿನಲ್ 2 ರಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಪಾರ್ಕಿಂಗ್ ಜಾಗದಲ್ಲಿ ಚಾರ್ಚಿಂಗ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಸೌಲಭ್ಯವು ಏಕಕಾಲದಲ್ಲಿ ಮೂರು ಬಸ್‌ಗಳಿಗೆ ಚಾಜ್ ಮಾಡುವ ಅವಕಾಶ ಕಲ್ಪಿಸುತ್ತದೆ. ಒಂದು ಬಾರಿ ಚಾರ್ಜ್ ಮಾಡಲು ಸುಮಾರು 45 ನಿಮಿಷಗಳ ಕಾಲ ತೆಗೆದುಕೊಳ್ಳುತ್ತದೆ ಮತ್ತು ಇದು ದಿನವಿಡೀ ಓಡಾಟ ಮಾಡಲು ಸಾಕು ಎನ್ನುವಷ್ಟಿರುತ್ತದ...