ಭಾರತ, ಏಪ್ರಿಲ್ 17 -- ಕೇಂದ್ರ ಸರ್ಕಾರದ ಬೆಲೆ‌ ಏರಿಕೆ ನೀತಿ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್‌ ಸಿಲೆಂಡರ್‌ ಹೊತ್ತು ಗಮನಸೆಳೆದರು.

ಎನ್‌ಡಿಎ ಕೂಟದ ಆಂತರಿಕ ಜಗಳ, ನಾಯಕತ್ವದ ಕೊರತೆಯನ್ನು ಮುಚ್ಚಿಡಲು ಅವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ. ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎನ್ನುವ ಘೋಷಣೆಯನ್ನು ಕೂಗಲಾಯಿತು.

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದರು,

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆ.‌ ಸಿಮೆಂಟ್, ಕಬ್ಬಿಣ, ಎಣ್ಣೆ, ಟೂಥ್‌ಪೇಸ್ಟ್‌‌‌, ಮೊಟ್ಟೆ ಹೀಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಬಿಜೆಪಿ. ಚಿನ್ನದ ಬೆ...