ಭಾರತ, ಮಾರ್ಚ್ 15 -- ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆ ಬೆಳಗಾವಿಯ ಕೇಂದ್ರ ಸ್ಥಾನದ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ಶನಿವಾರ ನಡೆದಿದ್ದು, ಮೇಯರ್ ಆಗಿ ಮಂಗೇಶ್ ಪವಾರ್, ಉಪ ಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಆಯ್ಕೆಯಾದರು. ಮಂಗೇಶ್ ಪವಾರ್ ಬೆಳಗಾವಿಯ 23ನೇ ಅವಧಿಯ ಮೇಯರ್ ಆದರು. ಮೇಯರ್ ಸ್ಥಾನ ಸಾಮಾನ್ಯರಿಗೆ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ಬೆಳಗಾವಿ ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಶನಿವಾರ ನಡೆದ ಚುನಾವಣೆ ಬಹಳ ಕುತೂಹಲ ಮೂಡಿಸಿತ್ತು. 65 ಮತದಾರರು ಇದ್ದ ಈ ಚುನಾವಣೆಯಲ್ಲಿ ಗೆದ್ದು ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿ ಬಹಳ ತಂತ್ರ - ಪ್ರತಿತಂತ್ರಗಳನ್ನು ರೂಪಿಸಿದ್ದವು. ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆನ್ನವರ ಅವರು ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭಿಸಿದರು.
ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ರಾಜು ಭಾತಖಾಂಡೆ, ಎಂಇಎಸ್ನ ಬಸವರಾಜ ಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.