Bengaluru, ಮೇ 13 -- ಮಂಗಳೂರು: ನಿದ್ದೆ ಮಾತ್ರೆ ಸೇವಿಸಿ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞಿರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಮೃತಪಟ್ಟಿದ್ದರೆ, ಅವರ ಪುತ್ರ ಚಿತ್ರಕಲಾಶಿಕ್ಷಕ, ರಾಜ್ಯಮಟ್ಟದ ಕಲಾವಿದ ಜಯರಾಮ್ ಕೆ. ಅವರ ಸ್ಥಿತಿ ಗಂಭೀರವಾಗಿದೆ. ಮಂಗಳವಾರ ಕಲ್ಯಾಣಿ ಅವರ ಅಂತ್ಯಸಂಸ್ಕಾರ ಮುಂಡಾಜೆಯ ರುದ್ರ ಭೂಮಿಯಲ್ಲಿ ನಡೆಯಿತು.

ಗಂಭೀರಾವಸ್ಥೆಯಲ್ಲಿರುವ ಅವರ ಪುತ್ರ ಚಿತ್ರಕಲಾ ಶಿಕ್ಷಕ, ರಾಜ್ಯ ಮಟ್ಟದ ಕಲಾವಿದ ಜಯರಾಂ ಕೆ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಬಿಗಡಾಯಿಸಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ. ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದ್ದು ವಿಷಮ ಸ್ಥಿತಿ ಇದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ತರಿಗೆ ಹಸ್ತಾಂತರಿಸಲಾಯಿತು.

ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕ...