Bengaluru, ಮೇ 24 -- ಮಂಗಳೂರು: ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಂಗಳೂರು ಸಮೀಪದ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲೀಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್‌ನಲ್ಲಿ ಕೇಳಿಕೊಂಡಿದ್ದಾರೆ. ಅಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್‌ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಷಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ಕೂಡ ಸ್ಥಳದಲ್ಲಿ ಜಮಾಯಿಸಿ ದಾಂಧಲೆಗೆ ಸಹಕಾರ ನೀಡಿದ್ದಾರೆ ಎನ್ನಲಾಗಿದೆ.
ಆ ಸಂದರ್ಭದಲ್ಲಿ ಬೇಕರಿಯೊಳಗಿದ್ದ ಅ...
Click here to read full article from source
To read the full article or to get the complete feed from this publication, please
Contact Us.