ಭಾರತ, ಫೆಬ್ರವರಿ 11 -- ಶಿವಮೊಗ್ಗ: ಭದ್ರಾವತಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆ ತಡೆಯಲು ಸೋಮವಾರ ರಾತ್ರಿ ಹೋಗಿದ್ದ ಗಣಿ ಮತ್ತು ಭೂವಿಜ್ಞಾನದ ಮಹಿಳಾ ಅಧಿಕಾರಿಯನ್ನು ನಿಂದಿಸಿದ ಪ್ರಕರಣ ರಾಜ್ಯದ ಗಮನಸೆಳೆದಿತ್ತು. ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಅವರ ಪುತ್ರ ಬಸವೇಶ್ ನಿಂದಿಸಿದ್ದು ಎನ್ನಲಾದ ಫೋನ್ ಕರೆಯ ಆಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ, ಮಹಿಳಾ ಅಧಿಕಾರಿ ನೀಡಿದ ದೂರಿನ ಪ್ರಕಾರ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಸಕ ಬಿಕೆ ಸಂಗಮೇಶ್ ಅವರ ಪುತ್ರನ ಬಸವೇಶ್ ಹೆಸರಿಲ್ಲ ಎಂಬ ಅಂಶ ಗಮನಸೆಳೆದಿದೆ.

ಬಂಧಿತರನ್ನು ಅಜಯ್‌, ರವಿ, ವರುಣ್ ಎಂದು ಗುರುತಿಸಲಾಗಿದೆ. ಈ ಪೈಕಿ ಅಜಯ್‌ ಎಂಬಾತನನ್ನು ಹೊನ್ನಾಳಿಯಲ್ಲಿ, ರವಿ ಮತ್ತು ವರುಣ್‌ನನ್ನು ಚನ್ನಗಿರಿ ರಸ್ತೆ ಬಳಿ ಪೊಲೀಸರು ಬಂಧಿಸಿದರು. ಇನ್ನೂ ನಾಲ್ಕು ಜನರ ಬಂಧನಕ್ಕೆ ಶೋಧ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವರು ಗಣಿ ಮತ್ತು ಭೂವ...