ಭಾರತ, ಮೇ 6 -- ಭಾರತದಲ್ಲಿ ಯುದ್ಧ ತಾಲೀಮು: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧದ ಕರಿಛಾಯೆ ಆವರಿಸಿದೆ. ಈಗಾಗಲೇ ಪಹಲ್ಗಾಮ್ ದಾಳಿಕೋರರ ಶೋಧ ಮತ್ತು ಉಗ್ರ ನಿಗ್ರಹಕ್ಕೆ ಸೇನಾಪಡೆ ಶೋಧ ಕಾರ್ಯಾಚರಣೆ ನಡೆಸಿದೆ. ಉಗ್ರ ದಾಳಿಗೆ ಕುಮ್ಮಕ್ಕು ನೀಡಿದ ಪಾಕಿಸ್ತಾನದ ವಿರುದ್ಧ ಭಾರತ ರಾಜತಾಂತ್ರಿಕ ಸಮರ ಸಾರಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಪೌರರಿಗೆ ಸ್ವರಕ್ಷಣೆ ತಾಲೀಮು ನಡೆಸುವುದಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ.
ಭಾರತದ 244 ವರ್ಗೀಕೃತ ನಾಗರಿಕ ರಕ್ಷಣಾ ಜಿಲ್ಲೆಗಳಲ್ಲಿ ಬುಧವಾರ (ಮೇ 7) ಅಣಕು ಸಮರ ಅಥವಾ ಯುದ್ಧ ತಾಲೀಮು ನಡೆಸಬೇಕು ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ. ಪ್ರಸ್ತುತ ಭೌಗೋಳಿಕ ಹಾಗೂ ರಾಜಕೀಯ ಸನ್ನಿವೇಶಗಳ ಹಿನ್ನೆಲೆಯಲ್ಲಿ ಹೊಸ ಹಾಗೂ ಸಂಕೀರ್ಣ ಬೆದರಿಕೆಗಳು ಎದುರಾಗಿದ್ದು, ಅದನ್ನು ಎದುರಿಸುವ ನಿಟ್ಟಿನಲ್ಲಿ ಪೌರರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಸರ್ಕಾರ ಹೇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.