ಭಾರತ, ಏಪ್ರಿಲ್ 22 -- ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ - ಉಷಾ ದಂಪತಿ ತಮ್ಮ ಮಕ್ಕಳೊಂದಿಗೆ ಭಾರತಕ್ಕೆ ಅಧಿಕೃತ ಪ್ರವಾಸ ಶುರುಮಾಡಿದ್ದು, ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೂ ಭೇಟಿ ನೀಡಿದರು. ಇದೇ ವೇಳೆ, ಮೋದಿ ಅಜ್ಜನ ಮನೆಯಲ್ಲಿ ಅಮೆರಿಕ ಉಪಾಧ್ಯಕ್ಷರ ಪುಟ್ಟ ಮಕ್ಕಳ ಸಂಭ್ರಮ ಸಡಗರದ ಚಿತ್ರನೋಟ ಗಮನಸೆಳೆದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಸೋಮವಾರ ನವದೆಹಲಿಯಲ್ಲಿ ಭೇಟಿಯಾದರು. ಪ್ರಧಾನಿ ಮೋದಿ ಅವರು ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಮತ್ತು ಅವರ ಮಕ್ಕಳೊಂದಿಗೆ ಕಾಣಿಸಿಕೊಂಡಿದ್ದಾರೆ. ವ್ಯಾನ್ಸ್‌ನ ಹಿರಿಯ ಮಗನನ್ನು ತಮ್ಮ ತೊಡೆಯ ಮೇಲೆ ಕೂರಿಸಿಕೊಂಡು ಆಪ್ತ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ತಮ್ಮ ನಿವಾಸಕ್ಕೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರ ಎರಡನೇ ಪುತ್ರನೊಂದಿಗೆ ಪ್ರಧಾನಿ ಮೋದಿ ಆಪ್ತ ಮಾತುಕತೆ ನಡೆಸಿದರು.

ಜೆಡಿ ವ್ಯಾನ್ಸ್ ಅವರ ಪುತ್ರರಿಬ್ಬರಿಗೂ ಪ್ರಧಾನಿ ಮೋದಿ ನವಿಲು ಗರಿಗಳನ್ನು ಉಡುಗೊರೆಯಾಗಿ ನೀಡಿದರು. ಪ್ರಧಾನಿ ಮೋದಿ ನಿವಾಸ...