ಭಾರತ, ಮೇ 9 -- ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ 'ಆಪರೇಷನ್ ಸಿಂದೂರ' ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ರಾಜ್ಯ ಮುಜರಾಯಿ ಇಲಾಖೆ ತನ್ನ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ಯೋಧರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿತ್ತು. ಇದರ ಅನ್ವಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮುಜರಾಯಿ ದೇವಸ್ಥಾನಗಳಲ್ಲಿ ಹೋಮ, ಹವನ, ವಿಶೇಷ ಪೂಜೆ, ಮಂತ್ರ, ವೇದಘೋಷ ಮೊಳಗಿತು. ಈ ಪವಿತ್ರ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ರಾಜಕಾರಣಿಗಳು, ಧಾರ್ಮಿಕ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ 35,000 ದೇವಾಲಯಗಳಲ್ಲಿ ಯೋಧರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸುವಂತೆ ಸಚಿವ ರಾಮಲಿಂಗ ರೆಡ್ಡಿ ಆದೇಶ ಹೊರಡಿಸಿದ್ದರು. ಬಸವನಗುಡಿಯ ಐತಿಹಾಸಿಕ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸುಮಾರು ಎರಡು ಗಂಟೆ ಕಾಲ ದುರ್ಗಾ ಹೋಮ ನಡೆಯಿತು. ಸರ್ಕಾರದ ಆದೇಶದನ್ವಯ ಅನೇಕ ದೇವಾಯಗಳಲ್ಲ...