ಭಾರತ, ಏಪ್ರಿಲ್ 29 -- ಪಾಕ್ನ 16 ಚಾನೆಲ್ಗಳಿಗೆ ನಿರ್ಬಂಧ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತದ ಬಗ್ಗೆ 'ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಭಾವನೆ ಕೆರಳಿಸುವ' ಸುದ್ದಿಗಳನ್ನು ಪ್ರಸಾರ ಮಾಡಿರುವ ಆರೋಪದ ಕಾರಣ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳನ್ನು ಭಾರತ ಸರ್ಕಾರ ಸೋಮವಾರ ನಿರ್ಬಂಧಿಸಿದೆ. ಗೃಹ ಸಚಿವಾಲಯದ ಶಿಫಾರಸಿನ ಪ್ರಕಾರ, ಯೂಟ್ಯೂಬ್ ಈ ಬಗ್ಗೆ ಕ್ರಮ ಕೈಗೊಂಡಿದೆ. ಇದರಲ್ಲಿ ಪಾಕಿಸ್ತಾನದ ಡಾನ್ ನ್ಯೂಸ್, ಜಿಯೋ ನ್ಯೂಸ್ಗಳೂ ಸೇರಿದ್ದು, ಈ ಎಲ್ಲ ಚಾನೆಲ್ಗಳ ಚಂದಾದಾರರ ಸಂಖ್ಯೆ 6.3 ಕೋಟಿ ಚಂದಾದಾರರು.
ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಈ ಚಾನೆಲ್ಗಳು ಭಾರತದ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿವೆ. ವಿಶೇಷವಾಗಿ ಭಾರತದ ಬಗ್ಗೆ, ಭಾರತೀಯ ಸೇನೆ ಮತ್ತುಭದ್ರತಾ ಏಜೆನ್ಸಿಗಳ ಕುರಿತು ಸುಳ್ಳು ಹಾಗೂ ಕಪೋಲಕಲ್ಪಿತ ಮಾಹಿತಿ ಪ್ರಸಾರ ಮಾಡಿರುವುದಕ್ಕೆ ಪಾಕಿಸ್ತಾನದ ಕೆಲವು ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿಸುವಂತೆ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಸರ್ಕಾರದಿಂದ ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.