Bengaluru, ಮೇ 9 -- ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಿಂದ ಹೊರಡುವ ಹಲವು ವಿಮಾನಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ ವಿಮಾನಯಾನ ಸಂಸ್ಥೆ ಇಂಡಿಗೋ, ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ, ಧರ್ಮಶಾಲಾ, ಬಿಕಾನೇರ್, ಜೋಧ್ಪುರ, ಕಿಶನ್ಗಢ ಮತ್ತು ರಾಜ್ಕೋಟ್ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ. ಮೇ 10ರ ಮಧ್ಯರಾತ್ರಿಯವರೆಗೆ ಇದು ಮುಂದುವರೆಯಲಿದೆ.
ವಿಮಾನಯಾನ ಸಂಸ್ಥೆಯು ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ ಮೂಲಕ ಮಾಹಿತಿ ನೀಡಿದೆ. ಇದೇ ವೇಳೆ ಅಗತ್ಯವಿರುವ ಯಾವುದೇ ಪ್ರಯಾಣ ಮಾರ್ಪಾಡುಗಳಿಗೆ ಸಹಾಯ ಒದಗಿಸಲಾಗುವುದಾಗಿ ಹೇಳಿದೆ.
ಅತ್ತ ಮುಂಬೈ ಹಾಗೂ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲೂ ಹೆಚ್ಚಿನ ಭದ್ರತಾ ಕ್ರಮಗಳಿಂದಾಗಿ ಸಂಭವನೀಯ ವಿಳಂಬ ತಡೆಯಲು ಸಲಹೆಯನ್ನು ನೀಡಿದೆ. ವಿಮಾನ ನಿಲ್ದಾಣಗಳು ಎಂದಿನಂತೆ ಸಾಮಾನ್ಯವಾಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.