ಭಾರತ, ಮೇ 9 -- ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮಾತನಾಡುತ್ತಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಈ ತಂಡದ ಅಭಿಮಾನಿಗಳ ವಿರುದ್ಧ ಸದಾ ವಿಷಕಾರುತ್ತಿದ್ದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ಭಾರತೀಯ ಸೇನೆ ವಿಚಾರವಾಗಿ ನಾಲಿಗೆ ಹರಿಯಬಿಟ್ಟಿದ್ದಾರೆ.
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿರುವ ಕುರಿತು ರಾಯುಡು ಆಡಿರುವ ಮಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಈತನನ್ನು ಪಾಕಿಸ್ತಾನಕ್ಕೆ ಓಡಿಸಿ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ಇಂಥವರು ದೇಶಕ್ಕೆ ಬೇಕಿಲ್ಲ ಎಂದೆಲ್ಲ ಆಕ್ರೋಶ ಹೊರಹಾಕುತ್ತಿದ್ದಾರೆ.
ಪೆಹಲ್ಗಾಮ್ನಲ್ಲಿ 26 ಅಮಾಯಕ ಜನರನ್ನು ಕೊಂದಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಆಪರೇಷನ್ ಸಿಂದೂರಿ ಮೂಲಕ 9 ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ್ದ ಭಾರತೀಯ ಸೇನೆ, ಪಾಕ್ಗೆ ತಕ್ಕ ಉತ್ತರ ನೀಡಿತ್ತು. ಈ ಬಳಿಕ ಪಾಕಿಸ್ತಾನ ಮತ್ತೆ ದಾಳಿ ನಡೆಸಿ 15 ನಾಗರಿಕರನ್ನು ಕೊಂದಿತ್ತು.
ಇದರ ನಂತರ ಪಾಕ್ನ ಪ್ರಮುಖ ನಗರಗಳ ಮೇಲೆ ಭಾರತ ಡ್ರೋನ್ ದಾಳಿ ನಡೆಸಿತ್ತು. ಇಷ್ಟಾದರೂ ಸುಮ್ಮನಾಗದ ಪಾಕ್,...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.