ಭಾರತ, ಮಾರ್ಚ್ 2 -- ನವದೆಹಲಿ: ಹರಿಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿರುವುದು, ರಾಜ್ಯ ಮಾತ್ರವಲ್ಲದೆ ದೇಶದೆಲ್ಲೆಡೆ ಭಾರಿ ರಾಜಕೀಯ ವಿವಾದ ಭುಗಿಲೆದ್ದಿದೆ. ರೋಹ್ಟಕ್ - ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಹಿಮಾನಿ ನರ್ವಾಲ್ ಶವ ಪತ್ತೆಯಾಗಿದೆ. 23 ವರ್ಷದ ಯುವತಿ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಭದ್ರಕೋಟೆಯಾದ ರೋಹ್ಟಕ್‌ನ ಯುವ ಕಾಂಗ್ರೆಸ್ ಪದಾಧಿಕಾರಿ ಎಂದು ಗುರುತಿಸಲಾಗಿದೆ.

"ರೋಹ್ಟಕ್‌ನಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಬರ್ಬರ ಹತ್ಯೆ ಅತ್ಯಂತ ದುಃಖಕರ ಮತ್ತು ಆಘಾತಕಾರಿಯಾಗಿದೆ. ನಾನು ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಈ ರೀತಿ ಹುಡುಗಿಯನ್ನು ಕೊಲೆ ಮಾಡಿ ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ಎಸೆದಿರುವುದು ಅತ್ಯಂತ ದುಃಖಕರ ಸಂಗತಿ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ದೊಡ್ಡ ಕಳಂಕವಾಗಿದೆ"ಎಂದು ಹರಿಯಾಣದ ಮಾಜಿ ಸಿಎಂ ಹೂಡಾ ಎಕ್ಸ್‌ನಲ್ಲಿ ಪೋಸ್ಟ್ ಮಾ...