नई दिल्ली, ಏಪ್ರಿಲ್ 17 -- ಟೀಮ್ ಇಂಡಿಯಾ ಕೋಚ್​​ಗಳ ಮೇಲಿರುವ ಸಿಟ್ಟನ್ನು ಬಿಸಿಸಿಐ ತೀರಿಸಿಕೊಂಡಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮೂವರು ಸಹಾಯಕ ಸಿಬ್ಬಂದಿಯನ್ನು ಬಿಸಿಸಿಐ ವಜಾಗೊಳಿಸಿದೆ. ಬಾರ್ಡರ್​ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಿರಾಶಾದಾಯಕ ಪ್ರದರ್ಶನದ ಹಿನ್ನೆಲೆ ಎಂಟು ತಿಂಗಳ ಹಿಂದಷ್ಟೇ ನೇಮಕವಾಗಿದ್ದ ಸಹಾಯಕ ಕೋಚ್ ಅಭಿಷೇಕ್ ಶರ್ಮಾ ಅವರನ್ನು ಕಿತ್ತು ಹಾಕಲಾಗಿದೆ. ಇವರ ಜೊತೆಗೆ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ಸ್ಟ್ರೆಂಥ್ ಆ್ಯಂಡ್ ಕಂಡೀಷನಿಂಗ್ ಕೋಚ್ ಸೋಹಂ ದೇಸಾಯಿ ಅವರನ್ನೂ ವಜಾಗೊಳಿಸಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಅಂತ್ಯದ ಬಳಿಕ ಬಿಸಿಸಿಐ ಸಹಾಯಕ ಸಿಬ್ಬಂದಿ ತೆಗೆದು ಹಾಕುವ ಕುರಿತು ಚರ್ಚೆಗಳು ನಡೆದಿದ್ದವು. ಕಳಪೆ ಪ್ರದರ್ಶನ ನೀಡಿದ್ದರ ಜೊತೆಗೆ ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆಯೂ ವಜಾಗೊಳಿಸಲು ಕಾರಣವಾಗಿದೆ. ಕೋಚ್ ಆದ ಬೆನ್ನಲ್ಲೇ ಅಂದಿನ ಸಹಾಯಕ ಸಿಬ್ಬಂದಿಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ಗಂಭೀರ್​ಗೆ ಬಿಸಿಸಿಐ ಸೂಚನೆ ನೀಡಿತ್ತು. ವಜಾಗೊಂಡ...