Bengaluru, ಮೇ 7 -- ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು. ಪಾಕಿಸ್ತಾನ ಬೆಂಬಲಿತ ಉಗ್ರರ ಈ ಕೃತ್ಯಕ್ಕೆ ಬಲವಾದ ಪ್ರತ್ಯುತ್ತರ ಕೊಡಲು ಇದೀಗ ಭಾರತ ಸಜ್ಜಾಗಿದೆ. ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆಗಳು ಇವೆ ಎಂದು ಜಾಗತಿಕ ಮಟ್ಟದಲ್ಲಿ ಚರ್ಚೆಗಳಾಗುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬುಧವಾರ (ಮೇ 7) ಅಣಕು ಕವಾಯತು (ಮಾಕ್ ಡ್ರಿಲ್) ನಡೆಸುವಂತೆ ಎಲ್ಲ ರಾಜ್ಯಗಳಿಗೆ ಸೂಚಿಸಿದೆ. 224 ಜಿಲ್ಲೆಗಳಲ್ಲಿ ಅಣಕು ಕವಾಯತು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.
ಪಹಲ್ಗಾಮ್‌ನಲ್ಲಿ 26 ನಾಗರಿಕರನ್ನು ಉಗ್ರರು ಬಲಿ ಪಡೆದ ವಿಚಾರವಾಗಿ ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಗೃಹ ಸಚಿವಾಲಯ ಈ ಅಣಕು ಕವಾಯತಿಗೆ ಸೂಚನೆ ನೀಡಿರುವುದು ಗಮನಾರ್ಹ. ಹೀಗಾಗಿ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರವನ್ನು ತೀರಿಸಿಕೊಳ್ಳಲು ಸಜ್ಜಾಗುತ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.