ಭಾರತ, ಮೇ 10 -- ಆಪರೇಷನ್ ಸಿಂದೂರದ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ‍ಪರಿಸ್ಥಿತಿ ಹದಗೆಟ್ಟಿದೆ. ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಭಾರತ-ಪಾಕ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸರ್ಕಾರವು ಭಾರತದ ಜನರಿಗೆ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಸೂಚಿಸಿದೆ. ಅನಿರೀಕ್ಷಿತ ಸಂದರ್ಭಗಳನ್ನು ಎದುರಿಸಲು ನಾವು ಕೆಲವೊಂದು ಸುರಕ್ಷಿತ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕು.

ದೇಶದ ಜನರು ಭಯಭೀತರಾಗದೇ, ಶಾಂತ ರೀತಿಯಲ್ಲಿ ಇರಬೇಕು ಎಂದು ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಆದರೆ ನಾವು ಮುಂಚಿತವಾಗಿ ಒಂದಿಷ್ಟು ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ನಮ್ಮ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಕೆಲವು ವಸ್ತುಗಳನ್ನು ಸದಾ ನಮ್ಮೊಂದಿಗೆ ಇರಿಸಿಕೊಳ್ಳಬೇಕು. ಯುದ್ಧದ ಪರಿಸ್ಥಿತಿ ಎದುರಾಗಿರುವ ಈ ಸಂದರ್ಭದಲ್ಲಿ ನಮ್ಮೊಂದಿಗೆ ಇರಬೇಕಾದ ಕೆಲವು ಅಗತ್ಯ ವಸ್ತುಗಳ ಬಗ್ಗೆ ಇಲ್ಲಿದೆ ಮಾಹಿತಿ.

ತುರ್ತು ಪರಿಸ್ಥಿತಿಯಲ್ಲಿ ಮನುಷ್ಯರಿಗೆ ಅಗತ್ಯವಾಗಿ ಬೇಕಿರುವುದು ಕುಡಿಯುವ ನೀರು. ಇಂತಹ ಸಂದರ್ಭದಲ್...