ಭಾರತ, ಏಪ್ರಿಲ್ 7 -- ನವದೆಹಲಿ: ಇನ್ನೇನು ಹಜ್ ಯಾತ್ರೆ ಸಮೀಪಿಸುತ್ತಿದೆ ಸೌದಿ ಅರೇಬಿಯಾಕ್ಕೆ ಸಾಕಷ್ಟು ಜನರು ಪ್ರಯಾಣ ಬೆಳೆಸಲಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಸೌದಿ ಅರೇಬಿಯಾ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ ಸೇರಿದಂತೆ 14 ರಾಷ್ಟ್ರಗಳ ಮೇಲೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಸರಿಯಾದ ನೋಂದಣಿ ಇಲ್ಲದೆ ವ್ಯಕ್ತಿಗಳು ಹಜ್ ಯಾತ್ರೆ ಮಾಡಲು ಪ್ರಯತ್ನಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಉಮ್ರಾ ವೀಸಾ ಹೊಂದಿರುವ ವ್ಯಕ್ತಿಗಳು ಏಪ್ರಿಲ್ 13 ರವರೆಗೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡಬಹುದು ಎಂದು ಹೇಳಲಾಗಿದೆ. ಈ ಹಿಂದೆ ಅನೇಕ ವಿದೇಶಿ ಪ್ರಜೆಗಳು ಉಮ್ರಾ ಅಥವಾ ಭೇಟಿ ವೀಸಾದಲ್ಲಿ ದೇಶಕ್ಕೆ ಪ್ರವೇಶಿಸಿ...