ಭಾರತ, ಮಾರ್ಚ್ 2 -- ನ್ಯೂಜಿಲೆಂಡ್ ವಿರುದ್ಧ ಭಾರತ ಗೆಲುವು ಸಾಧಿಸುವುದರೊಂದಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ನಲ್ಲಿ ಮುಖಾಮುಖಿ ಆಗುವ ತಂಡಗಳು ಯಾವುವು ಎಂಬುದು ಖಚಿತಗೊಂಡಿದೆ. ಮಾರ್ಚ್ 4ರಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇದು 2023ರ ನವೆಂಬರ್ 19 ರಂದು ನಡೆದ 2023 ರ ಕ್ರಿಕೆಟ್ ವಿಶ್ವಕಪ್ ನಂತರ ಎರಡೂ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯವಾಗಲಿದೆ. ಇಂಡೋ-ಆಸೀಸ್ ಕದನ ದುಬೈನಲ್ಲಿ ನಡೆಯಲಿದೆ. ಮಾರ್ಚ್ 5ರಂದು 2ನೇ ಸೆಮೀಸ್ನಲ್ಲಿ ನ್ಯೂಜಿಲೆಂಡ್ ಬುಧವಾರ (ಮಾರ್ಚ್ 5) ಲಾಹೋರ್ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.
ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಹ್ಯಾಟ್ರಿಕ್ ನೊಂದಿಗೆ ಸೆಮೀಸ್ಗೆ ಎಂಟ್ರಿಕೊಟ್ಟಿರುವ ಭಾರತ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 6 ವಿಕೆಟ್ಗಳಿಂದ ಮಣಿಸಿತ್ತು. ಬಳಿಕ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧವೂ ಅಷ್ಟೇಬ ವಿಕೆಟ್ಗಳಿಂದ ಜಯಿಸಿದ್ದ ಭಾರತ ಸೆಮಿಫೈನಲ್ಗೆ ಲಗ್ಗೆ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.