ಭಾರತ, ಮೇ 27 -- ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಮುಂದಿನ ತಿಂಗಳು ಆರಂಭವಾಗಲಿದೆ. ಮಹತ್ವದ ಸರಣಿಗೆ ಶುಭ್ಮನ್ ಗಿಲ್ ನೇತೃತ್ವದಲ್ಲಿ ಈಗಾಗಲೇ ಭಾರತ ಕ್ರಿಕೆಟ್ ತಂಡವನ್ನು ಘೋಷಿಸಲಾಗಿದೆ. ಈ ನಡುವೆ ಪಂದ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಲು ಸಿದ್ಧವಾಗಿರುವ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಜಿಯೋ ಹಾಟ್‌ಸ್ಟಾರ್ ಪಡೆದುಕೊಂಡಿದೆ. ಅಂದರೆ, ಜೂನ್ 20ರಂದು ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ಪ್ರಾರಂಭವಾಗಲಿರುವ ಈ ಸರಣಿಯ ಪಂದ್ಯಗಳನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ ವೀಕ್ಷಿಸಲು ಸಾಧ್ಯವಾಗುತ್ತದೆ.
ದೂರದರ್ಶನ ಪ್ರಸಾರ ಹಕ್ಕುಗಳನ್ನು ಸೋನಿ ಉಳಿಸಿಕೊಂಡಿದೆ. ಹೀಗಾಗಿ ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್‌ನಲ್ಲಿ ಸರಣಿಯ ಪಂದ್ಯಗಳನ್ನು ಪ್ರಸಾರ ಮಾಡಲಿದೆ.
ಈ ಪ್ರವಾಸದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯವು ಜ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.