Mangalore, ಮಾರ್ಚ್ 10 -- ಮಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಕೈಗೊಂಡ ಕ್ರಾಂತಿಕಾರಿ ನಿರ್ಧಾರವಾಗಿದ್ದ ಭೂಸುಧಾರಣೆ ನೀತಿಯ ಅನುಷ್ಠಾನ ಮಾಡಲು ಮುಂಚೂಣಿಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಕ್ರಬೈಲು ನಿವಾಸಿ, ಮಾಜಿ ಸಚಿವ ಬಿ.ಸುಬ್ಬಯ್ಯ ಶೆಟ್ಟಿ(91) ಅವರು ಮಾ.10 ರಂದು ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಾಕ್ರಬೈಲು ಗ್ರಾಮದಲ್ಲಿ 1934ರಲ್ಲಿ ಬಿ.ಸುಬ್ಬಯ್ಯ ಶೆಟ್ಟಿ ಜನಿಸಿದ್ದರು.

ಸುರತ್ಕಲ್ ವಿಧಾನಸಭಾ ಕ್ಷೇತ್ರದಲ್ಲಿ 1972ರ ಹಾಗೂ 1978ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ದೇವರಾಜ ಅರಸು ನೇತೃತ್ವದ ಸರ್ಕಾರದಲ್ಲಿ ಭೂ ಸುಧಾರಣಾ ಸಚಿವರಾಗಿದ್ದರು. ಸರ್ಕಾರವು ಜಾರಿಗೆ ತಂದಿದ್ದ ಭೂ ಸುಧಾರಣೆ ನೀತಿಯನ್ನು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತರಲು ಶ್ರಮಿಸಿದ್ದರು.

ರೈತರಿಗೆ ಕೃಷಿ ಭೂಮಿಯ ಮಾಲೀಕತ್ವವನ...