Bangalore, ಮಾರ್ಚ್ 11 -- ಬೆಂಗಳೂರು: ಕರ್ನಾಟಕ ಭೋವಿ ನಿಗಮದಲ್ಲಿ ನಡೆದಿದ್ದ ಅವ್ಯವಹಾರದಲ್ಲಿ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಐಡಿ ಡಿವೈಎಸ್‌ಪಿಯಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಕನಕಲಕ್ಷ್ಮಿ ಅವರನ್ನು ವಿಶೇಷ ತನಿಖಾ ತಂಡ ಎಸ್‌ಐಟಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ವಕೀಲೆ ಜೀವಾ ಅವರು, ನನ್ನ ಆತ್ಮಹತ್ಯೆಗೆ ಡಿವೈಎಸ್ ಪಿ ಕನಕಲಕ್ಷ್ಮಿ ಅವರೇ ಕಾರಣ ಎಂದು 13 ಪುಟಗಳ ಸುದೀರ್ಘ ಡೆತ್‌ನೋಟ್ ಬರೆದಿಟ್ಟು ನಾಲ್ಕು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ. ಈ ಹಿಂದೆ ಎರಡು ಬಾರಿ ಕನಕಲಕ್ಷ್ಮಿ ಅವರ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ಅಕ್ರಮದ ಕುರಿತು ಕಾಂಗ್ರೆಸ್ ಸರ್ಕಾರ ಸಿಐಡಿ ತನಿಖೆಗೆ ವಹಿಸಿ...
Click here to read full article from source
To read the full article or to get the complete feed from this publication, please
Contact Us.