Mangalore, ಮೇ 7 -- ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯುವ ರೆಡ್‌ಕ್ರಾಸ್ ಉಪಸಮಿತಿ, ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕ ಮತ್ತು ಪಾದುವ ಪದವಿ ಕಾಲೇಜು ಸಹಯೋಗದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಬುಧವಾರ ಮಂಗಳೂರು ನಗರದ ಪಾದುವಾ ಕಾಲೇಜಿನ ಮೈದಾನದಲ್ಲಿ ನಡೆಯಿತು. ಸಂಭಾವ್ಯ ವಾಯು ಅಥವಾ ಭಯೋತ್ಪಾದಕ ದಾಳಿಗಳ ಸಮಯದಲ್ಲಿ ಇಲಾಖೆಗಳ ನಡುವೆ ನೈಜ-ಸಮಯದ ಸಮನ್ವಯವನ್ನು ಸಾಧಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಸೇನಾಧಿಕಾರಿ ಕರ್ನಲ್.ಕೆ.ಜಯಚಂದ್ರನ್ ಮಾತನಾಡಿ ' ಭಾರತ ಇಂದು ದೇಶದ ಹೊರಗೆ ಮತ್ತು ಒಳಗೆ ಸವಾಲುಗಳನ್ನು ಎದುರಿಸುತ್ತಿದೆ. ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ದೇಶದ ನಾಗರಿಕರಲ್ಲಿ ಆತ್ಮ ವಿಶ್ವಾಸ ಮೂಡಿಸುವ ಸಲುವಾಗಿ ದೇಶಾದ್ಯಂತ ಪೂರ್ವ ಸಿದ್ಧತಾ ತಾಲೀಮು ನಡೆಸಲಾಗುತ್ತಿದೆ ಭಾರತೀಯ ಸೇನೆ ಈಗ ಸಶಕ್ತವಾಗಿದ್ದು ಆಪರೇಶನ್ ಸಿಂಧೂರ ಮೂಲಕ ಪಾಕಿಸ್ತಾನದ ಭಯೋತ್ಪಾದಕರಿಗೆ ಸೂಕ್ತ ಉತ್ತರ ನೀಡಿದೆ 'ಎಂದರು.

ಅಧ್ಯಕ್ಷತೆ ...