ಭಾರತ, ಜೂನ್ 13 -- ಮಂಗಳೂರು: ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಕಟ್ಟುನಿಟ್ಟಿನ ಕ್ರಮ ವಹಿಸಿವಂತೆ ಸೂಚಿಸಿದೆ. ಗೃಹಸಚಿವ ಜಿ.ಪರಮೇಶ್ವರ್ ಈ ಸಂದರ್ಭ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ, ದಂಧೆಕೋರರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿ, ಕಾನೂನು ಕ್ರಮ ಕೈಗೊಳ್ಳಬೇಕು.

ವಾಹನ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದೆ. 18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುತ್ತಿದ್ದು, ಅಪಘಾತಗಳು ಸಂಭವಿಸಿ ಸಾವು ನೋವುಗಳಾಗುತ್ತಿವೆ. ಇದನ್ನು ತಡೆಗಟ್ಟಲು ಅಗತ್ಯ ಕಾರ್ಯಾಚರಣೆ ಮತ್ತು ಜಾಗೃತಿ ಮೂಡಿಸಬೇಕು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳು ಕಾನೂನಿಂದ ತಪ್ಪಿಸಿಕೊಳ್ಳಬಾರದು. ನ್ಯಾಯಾಲಯದ ವಿಚಾರಣೆ...