ಭಾರತ, ಫೆಬ್ರವರಿ 2 -- ಮಂಗಳೂರು: ನಗರದ ಹೊರವಲಯದ ಕೆ ಸಿ ರಸ್ತೆಯಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡಿನ ದಾಳಿ ನಡೆಸಿದ್ದಾರೆ.

ಕೋಟೆಕಾರು ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುರುಗಂಡಿ ಥೇವರ್‌ ಪೊಲೀಸ್ ಸಿಬ್ಬಂದಿ ಮಂಜುನಾಥ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದಾಗ ಮೊಣಕಾಲಿಗೆ ಗುಂಡೇಟು ಹೊಡೆದು ಬಂಧಿಸಲಾಗಿದೆ.

ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಶನಿವಾರ ಮಹಜರು ಕಾರ್ಯ ನಡೆಯುತ್ತಿದ್ದ ವೇಳೆ ಆರೋಪಿ ಮುರುಗಂಡಿ ಥೇವರ್ ಪೊಲೀಸ್ ಸಿಬ್ಬಂದಿಗೆ ಹಲ್ಲೆ ಮಾಡಿ ತಪ್ಪಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಆತನ ಕಾಲಿಗೆ ಗುಂಡು ಹೊಡಿದಿದ್ದಾರೆ. ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ‌ ಬಂಧಿತನಾಗಿದ್ದ ಆರೋಪಿಗಳಲ್ಲಿ ಓರ್ವ ಆರೋಪಿ ಮುಂಬೈನ ಚೆಂಬೂರಿನ ಕಣ್ಣನ್ ಮಣಿ (36) ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಿ...