ಭಾರತ, ಫೆಬ್ರವರಿ 10 -- Rare Surgery: ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ ತೆಂಗಿನ ಗರಿ ಹಾಗೂ ಬಾಲಕನ ಕುತ್ತಿಗೆಗೆ ಹಾಕಿಕೊಂಡಿದ್ದ ಚೈನ್ ಹೊರ ತೆಗೆಯುವ ಮೂಲಕ ಜೀವದಾನ ನೀಡಿದ್ದಾರೆ.
ಬಾಲಕನ ಕುಟುಂಬ ಅಸ್ಸಾಂ ರಾಜ್ಯದ ಗುವಾಹಟಿ ಮೂಲದವರಾಗಿದ್ದು ಮಡಿಕೇರಿಯಲ್ಲಿ ಕಾಫಿ ಎಸ್ಟೇಟ್‌ನಲ್ಲಿ ಹೆತ್ತವರು ಕೂಲಿ ಕೆಲಸ ಮಾಡುತ್ತಿದ್ದರು. ಶನಿವಾರ ಕಮಲ್ ಹುಸೇನ್ ಎಂಬ ಬಾಲಕ ಆಟವಾಡುತ್ತಿದ್ದಾಗ ಹತ್ತಿರದಲ್ಲಿದ್ದ ತೆಂಗಿನ ಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು. ಇದರಿಂದ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯೊಳಗೆ ಹೊಕ್ಕಿತ್ತು. ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ರೆಫರ್ ಮಾಡಲಾಗಿತ್ತು. ತಕ್ಷಣವೇ ಮಂಗಳೂರಿನ ವೆನ್ಸಾಕ್ ಸರಕಾರಿ ಆಸ್ಪ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.