Bengaluru, ಜೂನ್ 8 -- ಮಂಗಳೂರು: ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಪತ್ತೆಯಾಗಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದ ಈ ಶಿಲ್ಪವನ್ನು ಕದ್ರಿ ದೇವಾಲಯದ ಆಡಳಿತಾಧಿಕಾರಿಗಳ ಅನುಮತಿಯೊಂದಿಗೆ ಮೇಲೆ ತೆಗೆದು ಅಧ್ಯಯನ ಮಾಡಲಾಯಿತು.

ಈ ಶಿಲ್ಪವು ಪದ್ಮಪೀಠದ ಮೇಲೆ ಪದ್ಮಾಸನದಲ್ಲಿ ಧ್ಯಾನಮುದ್ರೆಯಲ್ಲಿ ಕುಳಿತಂತೆ ಕಂಡರಿಸಲ್ಪಟ್ಟಿದೆ. ಶಿಲ್ಪದ ಬಲಗೈ ಸಂಪೂರ್ಣ ತುಂಡಾಗಿದೆ, ಎಡಗೈನ ಹಸ್ತ ಮಡಚಿದ ಕಾಲುಗಳ ಮಧ್ಯೆ ಇರಿಸಲ್ಪಟ್ಟಿದೆ. ಎಡಭುಜದ ಮೇಲಿಂದ ಹಾದುಬಂದಿರುವ ಉತ್ತರೀಯ, ಶಿಲ್ಪದ ಎಡಭಾಗದ ಎದೆಯ ಮೇಲೆ ಚಪ್ಪಟೆಯಾಗಿ ಇಳಿಬಿಟ್ಟಂತೆ ಅಸ್ಪಸ್ಟವಾಗಿ ಕಾಣುತ್...