ಭಾರತ, ಜೂನ್ 3 -- ಮಂಗಳೂರು: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ನೀಡಿದ ಸೂಚನೆಯಂತೆ ಸೋಮವಾರ (ಜೂನ್ 2) ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಢಿತು. ಆದರೆ, ಮೇಲ್ಸೇತುವೆಯಲ್ಲಿ ಹೋಗಬಹುದು ಎಂದು ಬೇಕಾಬಿಟ್ಟಿ ಹೋಗುವಂತಿಲ್ಲ. ಎದುರುಬದುರಾಗಿ ವಾಹನಗಳು ಸಂಚರಿಸುತ್ತಿರುವ ಕಾರಣ ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಮುಂಗಾರು ಚುರುಕುಗೊಂಡಿರುವ ಕಾರಣ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿ-ಆತಂಕ ಎದುರಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ...