ಭಾರತ, ಏಪ್ರಿಲ್ 26 -- ಮಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ಮಾಡಲಾದ ಪಡಿತರ ಚೀಟಿದಾರರನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಮಾಡಿಸುವುದಕ್ಕೆ ಕೊನೆಯ ಅವಕಾಶ ನೀಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ತಿಳಿಸಿದೆ. ನ್ಯಾಯಬೆಲೆ ಅಂಗಡಿಗಳ ಮೂಲಕ ಇ ಕೆವೈಸಿ ಮಾಡಿಸುವುದಕ್ಕೆ ಸರ್ಕಾರದ ಸೂಚನೆ ಇದ್ದು, ಏಪ್ರಿಲ್ 30 ರ ಒಳಗೆ ಈ ಕಾರ್ಯ ಮಾಡಬೇಕು. ಆ ಬಳಿಕ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರ ತಡೆಹಿಡಿಯಲ್ಪಡುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
1) ಜೀವಮಾಪನ ಕಡ್ಡಾಯ: ಪಡಿತರ ಚೀಟಿದಾರರನ್ನು ಹೊರತುಪಡಿಸಿ ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.
2) ವಿವರ ನೀಡುವುದು ಕಡ್ಡಾಯ: ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವರ, ಮೊಬೈಲ್ ಸಂಖ್ಯೆ ತುರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.