ಭಾರತ, ಮೇ 23 -- ಮಂಗಳೂರು: ಹೆಂಡತಿ ಮನೆ ಬಿಟ್ಟು ಹೋದ ವಿಚಾರದಲ್ಲಿ ಕೋಪಗೊಂಡ ಪತಿ ಮದುವೆ ಬ್ರೋಕರ್ ನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ನಗರದ ಹೊರವಲಯದ ವಳಚಿಲ್‌ನಲ್ಲಿ ಮೇ 22, 2025 ರಂದು ರಾತ್ರಿ 9:30 ಗಂಟೆ ಸುಮಾರಿಗೆ ನಡೆದ ಚಾಕು ಇರಿತದ ಘಟನೆಯಲ್ಲಿ ಸುಲೇಮಾನ್ (50) ಸಾವನ್ನಪ್ಪಿದ್ದಾರೆ. ಇವರ ಇಬ್ಬರು ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಗಾಯಗೊಂಡಿದ್ದಾರೆ.
ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಮೃತ ಸುಲೇಮಾನ್, ವಿವಾಹ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದರು. ಇವರು ಆರೋಪಿ ಮುಸ್ತಫಾ (30) ನಿಗೆ ಶಾಹೀನಾಜ್ ಎಂಬ ಮಹಿಳೆಯೊಂದಿಗೆ ಸುಮಾರು ಎಂಟು ತಿಂಗಳ ಹಿಂದೆ ವಿವಾಹವನ್ನು ಏರ್ಪಾಡು ಮಾಡಿದ್ದರು. ಆದರೆ, ವೈವಾಹಿಕ ಜೀವನದಲ್ಲಿ ಉಂಟಾದ ಕಲಹದಿಂದ ಶಾಹೀನಾಜ್ ಎರಡು ತಿಂಗಳ ಹಿಂದೆ ತಮ್ಮ ಮನೆಗೆ ಮರಳಿದ್ದರು. ಇದರಿಂದ ಮುಸ್ತಫಾ ಮತ್ತು ಸುಲೇಮಾನ್ ನಡುವೆ ಒಡಕು ಉಂಟಾಗಿತ್ತು.
ಗುರುವಾರ ರಾತ್ರಿ ಮುಸ್ತಫಾ ಸುಲೇಮಾನ್‌ಗೆ ಅವಾಚ್ಯ ಶಬ್ದಗಳಲ್ಲಿ ಕರೆ ಮಾಡಿದ್ದಾನೆ . ಇದಕ್ಕೆ ಪ್ರತಿಕ್ರಿಯೆಯಾಗಿ, ಸುಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.