Bengaluru, ಮೇ 13 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಬದಿಯಲ್ಲಿ ಬೇಕಾಬಿಟ್ಟಿ ಕಸ ಎಸೆಯುವವರನ್ನು ತಡೆಯಲು ಹಾಗೂ ಪತ್ತೆಹಚ್ಚಲು ತಂಡ ರಚನೆ ಮಾಡಲಾಗಿದೆ. ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ "ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು" ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೊಡ ಸೂಚಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಂಗಳವಾರ ಸಭೆ ನಡೆದಿದೆ. ದ.ಕ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ನಿಯಂತ್ರಿಸುವ ಸಲುವಾಗಿ ಸಭೆ ನಡೆಯಿತು.

ರಾಷ್ಟ್ರೀಯ ಹೆದ್ದಾರಿ 73 ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ತಡೆಗಟ್ಟಲು ಮೊದಲನೆಯದಾಗಿ ಮಂಗಳೂರು ತಾಲೂಕಿನ ಅಡ್ಯಾರ್, ಬಂಟ್ವಾಳ ತಾಲೂಕಿನ ತುಂಬೆ, ಪುದು ಹಾಗೂ ಕಳ್ಳಿಗೆ ಗ್ರಾಮ ಪಂಚಾಯತ್ಗಳನ್ನು ಆಯ್ಕೆ ಮಾಡಲಾಗಿದ್ದು, ಈ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಬೀಳುವ ತ್ಯಾಜ್ಯಗಳನ್ನು ತಡೆಗಟ್ಟಲು ಗಸ್ತು ಪಡೆ ಹಾಗೂ ಬ್ಲ...