ಭಾರತ, ಮೇ 14 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಬ್ಬರು ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದ ವ್ಯಕ್ತಿಯೊಬ್ಬರು ಕಳೆದ ವರ್ಷ ಮರಣಹೊಂದಿದ್ದು, ಅವರ ಮರಣದ ಉಪದಾನದ ಕುರಿತು ಬಂಟ್ವಾಳ ತಾಲೂಕು ಖಜಾನೆಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟ ಪ್ರಕರಣವಿದು. ಮಹಿಳೆಯೊಬ್ಬರು ನೀಡಿದ ದೂರಿನಂತೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ 2 ಗಂಟೆಯ ಬಳಿಕ ಬಂಟ್ವಾಳ ಖಜಾನೆಗೆ ದಾಳಿ ಮಾಡಿದ್ದು, ಈ ಸಂದರ್ಭ, ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಪ್ರಥಮ ದರ್ಜೆ ಸಹಾಯಕ ಬಸವೇಗೌಡ ಅವರು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದರು. ಇದೀಗ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ದೂರುದಾರ ಮಹಿಳೆಯ ಪತಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದನಂತರ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.