Mangaluru, ಮಾರ್ಚ್ 5 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಿ ಸನ್ನಿಧಿಗಳಲ್ಲಿ ಒಂದಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮಾ.5 ರಂದು ಬುಧವಾರ ಲೋಕಕಲ್ಯಾಣಾರ್ಥವಾಗಿ ಹಾಗೂ ಸಾನಿಧ್ಯ ವೃದ್ದಿಗಾಗಿ ಶತಚಂಡಿಕಾಯಾಗ ಪೂಜೆ ನಡೆಯಲಿದ್ದು, ಈಗಾಗಲೇ ಕಾರ್ಯಕ್ರಮಗಳು ಆರಂಭಗೊಂಡಿದೆ. ಇದು 105 ವರ್ಷಗಳ ನಂತರ ನಡೆಯುತ್ತಿರುವ ಕಾರಣ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ಮಾ.5ರ ಬೆಳಿಗ್ಗೆ 6 ರಿಂದ ಶತಚಂಡಿಕಾಯಾಗ ಆರಂಭವಾಗಲಿದ್ದು, ಮಧ್ಯಾಹ್ನ ಗಂಟೆ 12 ಕ್ಕೆ ಪೂರ್ಣಾಹುತಿಯಾಗಲಿದೆ. ಮಾ.6 ರಂದು ಗುರುವಾರ ದೊಡ್ಡ ರಂಗಪೂಜೆ ಉತ್ಸವ ನಡೆಯಲಿದೆ. ಮಾ.1 ರಿಂದ ಶ್ರೀ ಕ್ಷೇತ್ರದಲ್ಲಿ ವೈಧಿಕ ,ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಈಗಾಗಲೇ ಕ್ಷೇತ್ರಕ್ಕೆ ಭಕ್ತರು ಆಗಮಿಸಿ ವ್ಯವಸ್ಥೆ ಬಗ್ಗೆ ಕಣ್ತುಂಬಿಕೊಳ್ಳುತ್ತಿದ್ದಾರೆ.

ಚಂಡಿಕಾಯಾಗವನ್ನು ನೂರು ಬಾರಿ ಮಾಡುವ ಈ ಶತಚಂಡಿಕಾಯಾಗದ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ವೈಧಿಕ ಕಾರ್ಯಕ್ರಮಗಳಿಗೆ ಚಾಲನೆಯು ದೊರೆತಿದೆ.ವಿಶಾಲವಾದ ಹೋಮಕು...