ಭಾರತ, ಫೆಬ್ರವರಿ 26 -- ಮಂಗಳೂರು: ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಇದರಿಂದ ಇನ್ನು ಮುಂದೆ ಮಂಗಳೂರು-ಪುತ್ತೂರು-ಸುಬ್ರಹ್ಮಣ್ಯ ನಡುವೆ ಪ್ರತಿದಿನ ಸಂಚರಿಸುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಹೊಸ ವೇಳಾಪಟ್ಟಿಯಂತೆ ಮಂಗಳೂರಿನಿಂದ ಮುಂಜಾನೆ 4 ಗಂಟೆಗೆ ರೈಲು ಹೊರಟರೆ ಸುಬ್ರಹ್ಮಣ್ಯಕ್ಕೆ ಬೆಳಗ್ಗೆ 6.30ಕ್ಕೆ ತಲುಪಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಗ್ಗೆ ನಡೆಯುವ ಆಶ್ಲೇಷ ಬಲಿ ಸೇವೆ, ಮಹಾಭಿಷೇಕ ಸೇವೆಗಳಲ್ಲಿ ಪಾಲ್ಗೊಳ್ಳಬಹುದು. ಅಷ್ಟೇ ಅಲ್ಲದೆ ಮಧ್ಯಾಹ್ನ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಮಹಾಪೂಜೆ ಮುಗಿಸಿ ಮಧ್ಯಾಹ್ನ ಯಶವಂತಪುರದಿಂದ ಬರುವ ಗೋಮಟೇಶ್ವರ ಎಕ್ಸ್‌ಪ್ರೆಸ್, ಕಾರವಾರ ಎಕ್ಸ್‌ಪ್ರೆಸ್ ರೈಲಿನಲ್ಲಿ ಮರಳಿ ಮಂಗಳೂರಿಗೆ ತೆರಳಬಹುದು.

ಅಷ್ಪೇ ಅಲ್ಲದೆ ಪ್ರತಿ ವರ್ಷ ನಡೆಯುವ ಚಂ...