ಭಾರತ, ಫೆಬ್ರವರಿ 5 -- ಮಂಗಳೂರು (ದಕ್ಷಿಣ ಕನ್ನಡ): ರಾಜ್ಯವನ್ನೇ ತಲ್ಲಣಗೊಳಿಸಿದ್ದ ಉದ್ಯಮಿ ಮನೆ ಮೇಲೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ 30 ಲಕ್ಷ ರೂಪಾಯಿ ದೋಚಿದ್ದ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ನುಗ್ಗಿ ಹಣ ಲೂಟಿ ಮಾಡಿದ ಪ್ರಕರಣದಲ್ಲಿ ಫೆ.3 ರಂದು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಆರೋಪಿಯ ಹೆಸರು ಕೂಡ ಸಚಿನ್ ಎನ್ನಲಾಗಿದ್ದು, ಪೊಲೀಸರು ಹೆಸರನ್ನು ಖಚಿತ ಪಡಿಸಿಲ್ಲ. ಬಂಧಿತ ಆರೋಪಿ ಕೇರಳ ಮೂಲದವನು ಎನ್ನಲಾಗಿದ್ದು ಅನಾರೋಗ್ಯದ ಕಾರಣ ಪುತ್ತೂರು ಸರಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ.

ನೇರವಾಗಿ ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರು ಜನರ ಪೈಕಿ ಎರ್ಟಿಗಾ ಕಾರು ಸಹಿತ ಕೇರಳದ ಅನಿಲ್‌ ಫೆರ್ನಾಂಡೀಸ್ ಎಂಬಾತನನ್ನು ಬಂಧಿಸಿ ಕಾರು ಹಾಗೂ ಹಣ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಮುಂಬೈನಲ್ಲಿ ಮತ್ತೋರ್ವ ಆರೋಪಿ ಸಚಿ...