ಭಾರತ, ಮಾರ್ಚ್ 5 -- ಮಂಗಳೂರು: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ 45 ವಿಚಾರಣಾಧೀನಾ ಕೈದಿಗಳು ಫುಡ್‌ ಪಾಯಿಸನ್‌ ಆಗಿ ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಒಬ್ಬ ಕೈದಿ ಸ್ಥಿತಿ ಗಂಭೀರವಾಗಿದೆ. ಇಂದು (ಮಾರ್ಚ್‌ 5, ಬುಧವಾರ) ಸಂಜೆ ಈ ಘಟನೆ ನಡೆದಿದ್ದು, ವಿಷಾಹಾರ ಸೇವನೆಯಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ. ಏಕಾಏಕಿ ವಾಂತಿ, ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಸ್ವಸ್ಥ ಕೈದಿಗಳನ್ನು ಕೂಡಾ ಸಹ ಕೈದಿಗಳೇ ಹೊತ್ತು ಸಾಗಿಸಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ ಹೋಗುತ್ತೇವೆ ಎಂದು ಕೈದಿಗಳು ಪಟ್ಟು ಹಿಡಿದಿದ್ದರು. ಆಕ್ರೋಶಗೊಂಡಿದ್ದ ಕೈದಿಗಳನ್ನು ವಾಹನದಿಂದ ಕೆಳಗಿಳಿಸಿದ ಪೊಲೀಸರು, ಅಸ್ವಸ್ಥ ಕೈದಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಸಂಜೆ 4.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆ್ಯಂಬುಲೆನ್ಸ್, ಪೊಲೀಸ್ ವಾಹನಗಳಲ್ಲಿ ಜಿ...