Mangalore, ಏಪ್ರಿಲ್ 20 -- ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ಸಮೀಪ ವಾಲ್ತಾಜೆ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನ ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ(40 ವ.) ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಆಟೋಕ್ಕೆ, ಬೆಂಗಳೂರಿನಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ರಸ್ತೆ ಮೇಲೆಯೇ ಎಸೆಯಲ್ಪಟ್ಟಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ, ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರು ಭಾಗದಲ್ಲಿ ಭಾನುವಾರ ಸಂಜೆಯಿಂದ ಮಳೆಯಾಗುತ್ತಿತ್ತು. ಈ ವೇಳೆ ಆಟೋ ರಿಕ್ಷಾ ಬರುವಾಗ ಕಾರು ಎದುರಿನಿಂದ ಬಂದು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.